

ಬೀದರ್: ಈ ವರ್ಷದ ರಾಜ್ಯ ಬಜೆಟ್‍ನಲ್ಲಿ ಮುಖ್ಯಮಂತ್ರಿ ಅವರು ಭಾಲ್ಕಿ ತಾಲ್ಲೂಕು ಆಸ್ಪತ್ರೆ ಹಾಗೂ ಬಸವಕಲ್ಯಾಣದ ವಿಭಾಗೀಯ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಘೋಷಣೆ ಮಾಡಿದ್ದರಿಂದ ಜನರಿಗೆ ಹೆಚ್ಚಿನ ವೈದ್ಯಕೀಯ ಸೇವೆ ಸಿಗಲಿದೆ ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಹೇಳಿದ್ದಾರೆ.
ಬಸವಕಲ್ಯಾಣದ ಅನುಭವ ಮಂಟಪ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆ ನೀಡಿರುವುದು ಜನರಿಗೆ ಸಂತಸ ತಂದಿದೆ ಎಂದು ತಿಳಿಸಿದ್ದಾರೆ.