

ಬೀದರ್: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ದೂರದೃಷ್ಟಿಯ ಬಜೆಟ್ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹೇಳಿದ್ದಾರೆ.
ಶಿಕ್ಷಣ, ಆರೋಗ್ಯ, ಕೃಷಿ, ಪ್ರವಾಸೋದ್ಯಮ ಮೊದಲಾದ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಡಲಾಗಿದೆ. ಸಾರ್ವಜನಿಕರಿಗೆ ಮೂಲಸೌಕರ್ಯ ಒದಗಿಸುವುದಕ್ಕೂ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬಜೆಟ್‍ನಲ್ಲಿ ಎಲ್ಲ ವರ್ಗಗಳ ಜನರ ಪ್ರಗತಿಗೆ ಅನೇಕ ಯೋಜನೆಗಳನ್ನು ಪ್ರಕಟಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ.