

ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್ ಅಭಿವೃದ್ಧಿ ಪರವಾದ ಬಜೆಟ್ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಬಣ್ಣಿಸಿದ್ದಾರೆ.
ಬಜೆಟ್‍ನಲ್ಲಿ ಮುಖ್ಯಮಂತ್ರಿ ಅವರು ಜನರ ಸ್ವಾವಲಂಬಿ ಬದುಕಿಗೆ ನೆರವಾಗುವ ಗ್ಯಾರಂಟಿ ಯೋಜನೆಗಳ ಮುಂದುವರಿಕೆ ಜತೆಗೆ ಅನೇಕ ಅಭಿವೃದ್ಧಿ ಪರ ಯೋಜನೆಗಳನ್ನು ಘೋಷಿಸಿದ್ದಾರೆ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ರೂ. 5 ಸಾವಿರ ಕೋಟಿ ಕಾಯ್ದಿರಿಸಿದ್ದಾರೆ. ಶಿಕ್ಷಕರ 5,267 ಖಾಲಿ ಹುದ್ದೆಗಳ ಭರ್ತಿ ಮಾಡುವುದಾಗಿ ಪ್ರಕಟಿಸಿದ್ದಾರೆ. ಇದು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.