ಅಭಿವೃದ್ಧಿ ಪರವಾದ ಬಜೆಟ್

uday warad - Copy
Published on

ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಅಭಿವೃದ್ಧಿ ಪರವಾದ ಬಜೆಟ್. ಈ ಬಜೆಟ್ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ದೂರದೃಷ್ಟಿಯ ಬಜೆಟ್ ಆಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಉದಯಕುಮಾರ ವಾರದ್ ಹೇಳಿದ್ದಾರೆ.

ಬಜೆಟ್ನಲ್ಲಿ ಮುಖ್ಯಮಂತ್ರಿ ಅವರು ಜನರ ಸ್ವಾವಲಂಬಿ ಬದುಕಿಗೆ ನೆರವಾಗುವ ಗ್ಯಾರಂಟಿ ಯೋಜನೆಗಳ ಮುಂದುವರಿಕೆ ಜತೆಗೆ ಅನೇಕ ಅಭಿವೃದ್ಧಿ ಪರ ಯೋಜನೆಗಳನ್ನು ಘೋಷಿಸಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪ್ರವಾಸೋದ್ಯಮ ಮೊದಲಾದ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಡಲಾಗಿದೆ. ಸಾರ್ವಜನಿಕರಿಗೆ ಮೂಲಸೌಕರ್ಯ ಒದಗಿಸುವುದಕ್ಕೂ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬಜೆಟ್ನಲ್ಲಿ ಎಲ್ಲ ವರ್ಗಗಳ ಜನರ ಪ್ರಗತಿಗೆ ಅನೇಕ ಯೋಜನೆಗಳನ್ನು ಪ್ರಕಟಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net