ಅವಕಾಶ ಗಿಟ್ಟಿಸಿಕೊಳ್ಳಲು ಪ್ರಯತ್ನಿಸಿ

Akkamadevi Centre
Published on

ಬೀದರ್: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಬೀದರ್ ವಿಶ್ವವಿದ್ಯಾಲಯದ ಕುಲಸಚಿವೆ ಸುರೇಖಾ ಸಲಹೆ ಮಾಡಿದರು.

ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದಲ್ಲಿ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ಮತ್ತು ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಸಹಯೋಗದಲ್ಲಿ ಶನಿವಾರ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರು ತಮಗೆ ನ್ಯಾಯಯುತವಾಗಿ ಸಿಗಬೇಕಾದ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಪ್ರೊ. ಯು.ಕೆ. ಕುಲಕರ್ಣಿ ಮಾತನಾಡಿ, ಲಿಂಗ ಅಸಮಾನತೆ ಸಂಪೂರ್ಣ ನಿವಾರಣೆಯಾಗಬೇಕಿದೆ ಎಂದು ಹೇಳಿದರು.

ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಹಾವಗಿರಾವ್ ಮೈಲಾರೆ ಮಾತನಾಡಿ, ಮಹಿಳೆಯರು ಜೀವನದಲ್ಲಿ ಸಾಧಿಸುವ ಛಲ ಬೆಳೆಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕೇಂದ್ರದ ನಿರ್ದೇಶಕ ಪ್ರೊ. ಆರ್.ವಿ. ಗಂಗಶೆಟ್ಟಿ ಮಾತನಾಡಿ, ಮಹಿಳೆಯರು ಸಮಾಜದಲ್ಲಿ ತಮ್ಮದೇ ಆದ ಛಾಪು ಮೂಡಿಸಬೇಕು ಎಂದು ಹೇಳಿದರು.

ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಪ್ರಾಚಾರ್ಯ ನಾಗಪ್ಪ ಜಾನಕನೋರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇಂದ್ರದ ಡಾ. ಪಂಡಿತ, ಡಾ. ಅನ್ನಪೂರ್ಣ, ಡಾ. ಸಂಗಪ್ಪ ತೌಡಿ, ಡಾ. ನಾಗೇಂದ್ರಪ್ಪ ಮೈಲಾರಿ, ಈಶ್ವರ ರೆಡ್ಡಿ, ಪ್ರಿಯಾಂಕಾ, ಪ್ರೇಮಲತಾ, ರವಿ, ಶಂಕರ, ಮಹೇಶ್ ರೆಡ್ಡಿ, ಲಕ್ಷ್ಮಿ, ಮಲ್ಲಿಕಾರ್ಜುನ, ಕಾಲೇಜಿನ ರಾಖಿ, ಮಂಗಲಾ, ರಾಜಮ್ಮ, ಸಪ್ನಾ, ಅಂಬಿಕಾ, ಶ್ವೇತಾ, ವಿಜಯಲಕ್ಷ್ಮಿ, ನಟರಾಜ, ನೆಹರೂ ಪವಾರ್, ಆಕಾಶ್ ಇದ್ದರು. ಶ್ರೀಲತಾ ಎಂ. ನಿರೂಪಿಸಿದರು. ಅರ್ಚನಾ ಎಚ್. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net