ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಸಂಜಯ್ ಜಾಗೀರದಾರ್

Sanjay Jagirdar Photo
Published on

ಬೀದರ್: ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ಉಪಾಧ್ಯಕ್ಷರಾಗಿ ಸಂಜಯ್ ಜಾಗೀರದಾರ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಏಜಾಸ್ ಪಾಷ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ನೇಮಕವು ಮುಂದಿನ ಆದೇಶದ ವರೆಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಜಾಗೀರದಾರ್, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಎರಡೂವರೆ ದಶಕದಿಂದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿ ಕಾಂಗ್ರೆಸ್, ಯುವ ಘಟಕ, ಜಿಲ್ಲಾ ಘಟಕ, ಕೆಪಿಸಿಸಿಯ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಪಕ್ಷ ನಿಷ್ಠೆಗೆ ಈಗ ಉನ್ನತ ಹುದ್ದೆ ಒಲಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net