ಏಡ್ಸ್ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ

Photo- Siddharood Degree College 1 (1)
Published on

ಬೀದರ್: ಮಾರಕ ಏಡ್ಸ್ ನಿಯಂತ್ರಣಕ್ಕೆ ಎಲ್ಲರೂ ಮುಂಜಾಗ್ರತೆ ವಹಿಸಬೇಕು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಜಿಲ್ಲಾ ಮೇಲ್ವಿಚಾರಕ ಸೂರ್ಯಕಾಂತ ಹೇಳಿದರು.

ನಗರದ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನಲ್ಲಿ ಗುರುವಾರ ನಡೆದ ರೆಡ್ ರಿಬ್ಬನ್ ಕ್ಲಬ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಏಡ್ಸ್‍ಗೆ ಔಷಧಿ ಇಲ್ಲ. ಹೀಗಾಗಿ ರೋಗ ಬರದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಅವಶ್ಯಕವಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಮಾತನಾಡಿ, ಏಡ್ಸ್ ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ಕಡಿಮೆಗೊಳಿಸುತ್ತದೆ ಎಂದು ಹೇಳಿದರು.

ಚಿದಂಬರ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಮಡಿವಾಳಪ್ಪ ಗಂಗಶೆಟ್ಟಿ ಉದ್ಘಾಟಿಸಿದರು. ಏಡ್ಸ್ ಮುಕ್ತಿಯ ಕ್ರಮಗಳು ಕುರಿತ ಭಾಷಣ ಸ್ಪರ್ಧೆಯಲ್ಲಿ ಗೀತಾ ವಿಠ್ಠಲ ಪ್ರಥಮ, ವೈಷ್ಣವಿ ಮಿಟ್ಟುರಾಮ ದ್ವಿತೀಯ ಹಾಗೂ ದೀಪಿಕಾ ಅಶೋಕ್ ತೃತೀಯ ಬಹುಮಾನ ಗಳಿಸಿದರು.

ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಸೂರ್ಯಕಾಂತ ಐನಾಪುರೆ, ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ, ಬ್ರಿಮ್ಸ್ ರಕ್ತನಿಧಿ ಕೇಂದ್ರದ ಶಿವನಾಥ ಸ್ವಾಮಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಕಾರ್ಯಕ್ರಮ ಸಹಾಯಕ ಸಂಜಯಕುಮಾರ, ಉಪನ್ಯಾಸಕರಾದ ಪಂಡಿತ, ನೆಹರೂ ಪವಾರ್, ಮಂಗಲಾ, ರಾಜಮ್ಮ, ಅಂಬಿಕಾ, ಶ್ವೇತಾ, ಸಪ್ನಾ, ಅರ್ಚನಾ, ಕಾಲೇಜು ಸಿಬ್ಬಂದಿ ಆಕಾಶ್ ಇದ್ದರು.

ಕಾಲೇಜು ಪ್ರಾಚಾರ್ಯ ನಾಗಪ್ಪ ಜಾನಕನೋರ ಸ್ವಾಗತಿಸಿದರು. ಉಪನ್ಯಾಸಕ ಈಶ್ವರ ರೆಡ್ಡಿ ನಿರೂಪಿಸಿದರು. ರಾಖಿ ಕಾಡ್ಗೆ ವಂದಿಸಿದರು.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೋಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಹಾಗೂ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net