ದೇಶದ ಪ್ರತಿಭೆಗಳು ವಿದೇಶಕ್ಕೆ: ಕಳವಳ

Jeejamaata School Photo
Published on

ಬೀದರ್: ಪ್ರತಿ ವರ್ಷ ದೇಶದ ಆರು ಲಕ್ಷ ಪ್ರತಿಭಾವಂತರು ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುತ್ತಿದ್ದಾರೆ

ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕಾರ್ಯಕಾರಿಣಿ ಸದಸ್ಯ ಬಾಬುರಾವ್ ದಾನಿ ಕಳವಳ ವ್ಯಕ್ತಪಡಿಸಿದರು.

ನಗರದ ವಿದ್ಯಾನಗರ ಕಾಲೊನಿಯ ಜೀಜಾಮಾತಾ ಕನ್ಯಾ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಭಾವಂತರ ಸೇವೆ ದೇಶಕ್ಕೆ ಸಿಗಬೇಕು. ಪ್ರತಿಯೊಬ್ಬರೂ ದೇಶವನ್ನು ಪ್ರೀತಿಸಬೇಕು. ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಶ್ರೇಷ್ಠ ವಿಜ್ಞಾನಿಗಳಾಗಲು ಪ್ರಯತ್ನಿಸಬೇಕು. ಆದರ್ಶ ವ್ಯಕ್ತಿತ್ವ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಶಿಕ್ಷಣವು ಮನುಷ್ಯನಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ. ಸಾಧನೆಗೆ ನೆರವಾಗುತ್ತದೆ ಎಂದು ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹೇಳಿದರು.

ವಿದ್ಯಾರ್ಥಿಗಳು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಬೇಕು ಎಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಸಂಗ್ರಾಮ ಚಾಮಾ ಸಲಹೆ ಮಾಡಿದರು.

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆಯಲು ಕಠಿಣ ಪರಿಶ್ರಮ ವಹಿಸಬೇಕು. ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಶಿಕ್ಷಕ ಪರಮೇಶ್ವರ ಬಿರಾದಾರ ಹೇಳಿದರು.

ಬಿಆರ್‍ಪಿ ತಾನಾಜಿ ಬಿರಾದಾರ, ಜೀಜಾಮಾತಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಅರ್ಜುನ ಧೂಳೆ ಮಾತನಾಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ಡಾ. ವೈಶಾಲಿ ದೇವಪ್ಪ ಹಾಗೂ ಹೃಷಿಕೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂತೋಷಕುಮಾರ ಮಂಗಳೂರೆ ಅವರನ್ನು ಸನ್ಮಾನಿಸಲಾಯಿತು.

ಆಕ್ಸ್‍ಫರ್ಡ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಉದಯಕುಮಾರ, ಜೀಜಾಮಾತಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವಾಸುದೇವ ರಾಠೋಡ್, ರಾಜಕುಮಾರ ಗಾದಗೆ, ಆನಂದ ಕೆ. ಜಾಧವ್, ನಾಗರತ್ನ ಜಮಾದಾರ್, ಸಂಜಯ್ ಪಾಟೀಲ ಮತ್ತಿತರರು ಇದ್ದರು.

ಪೂಜಾ ಸಾಂಗ್ವಿ ನಿರೂಪಿಸಿದರು. ಅನಿಲಕುಮಾರ ಟೇಕೋಳೆ ಸ್ವಾಗತಿಸಿದರು. ಪ್ರಭಣ್ಣ ಕಾಳಗೊಂಡ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net