ಉಚಿತ ಯೋಗ ಶಿಬಿರ

Kamshetty Chikkbase - Copy
Published on

ಬೀದರ್: ಇಲ್ಲಿಯ ಸೂರ್ಯ ನಮಸ್ಕಾರ ಸಂಘವು ಆಸಕ್ತರಿಗೆ ಉಚಿತ ಯೋಗ ತರಬೇತಿ ನೀಡಲು ನಿರ್ಧರಿಸಿದೆ.

ಬದಲಾದ ಜೀವನ ಶೈಲಿ, ಆಹಾರ, ವಾಯು ಮಾಲಿನ್ಯ ಮತ್ತಿತರ ಕಾರಣಗಳಿಂದಾಗಿ ಜನ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರಿಗೆ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ನೆರವಾಗುವ ಉದ್ದೇಶದಿಂದ ಉಚಿತ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸೂರ್ಯ ನಮಸ್ಕಾರ ಸಂಘದ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ ತಿಳಿಸಿದ್ದಾರೆ.

ಹೈದರಾಬಾದ್ ರಿಂಗ್ ರಸ್ತೆಯ ನಾಗಶೆಟ್ಟಿ ಕರ್ಪೂರ ಲೇಔಟ್‍ನಲ್ಲಿ ಪ್ರತಿ ದಿನ ಬೆಳಿಗ್ಗೆ 6 ರಿಂದ 8 ರ ವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಸೂರ್ಯ ನಮಸ್ಕಾರ, ಧ್ಯಾನ, ಪ್ರಾಣಾಯಾಮ ಮೊದಲಾದ ಯೋಗದ ಪ್ರಕಾರಗಳನ್ನು ಹೇಳಿಕೊಡಲಾಗುವುದು ಎಂದು ಹೇಳಿದ್ದಾರೆ.

ನೆಮ್ಮದಿಯ ಜೀವನಕ್ಕೆ ಸದೃಢ ಆರೋಗ್ಯ ಬಹಳ ಅವಶ್ಯಕವಾಗಿದೆ. ಹೀಗಾಗಿ ಸಾರ್ವಜನಿಕರು ಉಚಿತ ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಕೋರಿದ್ದಾರೆ.

ಶಿಬಿರದಲ್ಲಿ ಪಾಲ್ಗೊಳ್ಳಲು ಹೆಸರು ನೋಂದಣಿಗೆ ಮೊಬೈಲ್ ಸಂಖ್ಯೆ 7022513111ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net