23ಕ್ಕೆ ಉಚಿತ ಕಾರ್ಯಾಗಾರ, ಮಾದರಿ ಪರೀಕ್ಷೆ

Published on

ಬೀದರ್: ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ವಿನ್ನರ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವು ನಗರದ ಹೊಸ ಬಸ್ ನಿಲ್ದಾಣ ಸಮೀಪದ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಮಾ. 23 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2ರ ವರೆಗೆ ವಿಶೇಷ ಉಚಿತ ಕಾರ್ಯಾಗಾರ ಹಾಗೂ ಮಾದರಿ ಪರೀಕ್ಷೆ ಹಮ್ಮಿಕೊಂಡಿದೆ.

ಕಾರ್ಯಾಗಾರದಲ್ಲಿ ಅನುಭವಿ ಹಾಗೂ ಖ್ಯಾತ ಸಂಪನ್ಮೂಲ ವ್ಯಕ್ತಿಗಳು ಪರೀಕ್ಷೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲಿರುವ ಜಿಲ್ಲೆಯ ಅಭ್ಯರ್ಥಿಗಳು ಕಾರ್ಯಾಗಾರದ ಲಾಭ ಪಡೆಯಬೇಕು ಎಂದು ಕೇಂದ್ರದ ನಿರ್ದೇಶಕಿ ಪೂಜಾ ಹನುಮಂತರಾವ್ ಪಾಟೀಲ ಮನವಿ ಮಾಡಿದ್ದಾರೆ.

ಕಾರ್ಯಾಗಾರದ ಕುರಿತು ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಣಿಗೆ ಮೊಬೈಲ್ ಸಂಖ್ಯೆ 9538360707 ಅಥವಾ 8970850873 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net