

ಬೀದರ್: ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ನ ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ವೈದ್ಯರ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ ಭೇಟಿ ನೀಡಿ ಔರಾದ್ನಲ್ಲಿ ಈಚೆಗೆ ಕಸದ ತೊಟ್ಟಿಯಲ್ಲಿ ಸಿಕ್ಕ ಅನಾಥ ನವಜಾತ ಶಿಶುವಿನ ಆರೋಗ್ಯ ವಿಚಾರಿಸಿದರು. ಒಂದು ವಾರಮೆರ್ನಲ್ಲಿ ಒಂದೇ ಮಗುವಿಗೆ ಚಿಕಿತ್ಸೆ ನೀಡಬೇಕು. ಆದರೆ ಇಲ್ಲಿ ಇಬ್ಬರು ಶಿಶುಗಳಿಗೆ ಚಿಕಿತ್ಸೆ ನೀಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಜಿಲ್ಲಾ ಶಸ್ತ್ರಚಿಕಿತ್ಸರನ್ನು ಪ್ರಶ್ನಿಸಿದರು.
ಒಂದು ಮಗುವಿನ ಕಾಯಿಲೆ ಮತ್ತೊಂದಕ್ಕೆ ಬರುವ ಸಾಧ್ಯತೆ ಇದೆ. ತಕ್ಷಣ ಪ್ರತ್ಯೇಕವಾಗಿ ಚಿಕಿತ್ಸೆ ನೀಡಬೇಕು. ನವಜಾತ ಶಿಶುಗಳಿಗೆ ಸೂಕ್ತ ಚಿಕಿತ್ಸೆ ಜತೆಗೆ ಸಂಪೂರ್ಣ ಆರೋಗ್ಯ ಕಾಪಾಡಬೇಕು ಎಂದು ಸೂಚಿಸಿದರು.
ಎನ್ಐಸಿಯು ವ್ಯವಸ್ಥೆ ಇದ್ದರೂ 10 ವಾರಮೆರ್ಗಳು ಚಾಲ್ತಿಯಲ್ಲಿಲ್ಲದೆ ಸ್ಥಗಿತಗೊಂಡಿವೆ. ಈ ಬಗ್ಗೆ ಜಿಲ್ಲಾಡಳಿತ ನಿಗಾ ವಹಿಸಿ ಎಲ್ಲ ವಾರಮೆರ್ಗಳು ಕಾಯರ್ಾಚರಣೆಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಔರಾದ್ ಮತ್ತು ಹುಮನಾಬಾದ್ ಮಕ್ಕಳು ಸಹ ಇಲ್ಲಿಗೆ ಬರುತ್ತಿವೆ. ಆಯಾ ತಾಲೂಕಿನಲ್ಲಿರುವ ತಾಯಿ-ಮಗು ಆಸ್ಪತ್ರೆಗಳಲ್ಲೇ ವಾರಮೆರ್ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಹಮೊದ್ದೀನ್, ಔರಾದ್ ಸಿಡಿಪಿಒ ಇಮಾಲಪ್ಪ ಇತರರಿದ್ದರು.