7 ರಿಂದ ಸದಸ್ಯತ್ವ ಅಭಿಯಾನ

Shivaraj Patil - Copy
Published on

ಬೀದರ್: ಜಿಲ್ಲಾ ಔಷಧ ವ್ಯಾಪಾರಿಗಳ ಸಂಘವು ಏಪ್ರಿಲ್ 7 ರಿಂದ ಸದಸ್ಯತ್ವ ಅಭಿಯಾನ ನಡೆಸಲಿದೆ ಎಂದು ಸಂಘದ ಅಧ್ಯಕ್ಷ ಶಿವರಾಜ ಪಾಟೀಲ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸಂಘವನ್ನು ಇನ್ನಷ್ಟು ಬಲಪಡಿಸುವ ದಿಸೆಯಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಔಷಧ ವ್ಯಾಪಾರಿಗಳು ನಗರದ ಜನವಾಡ ರಸ್ತೆಯಲ್ಲಿನ ದೂರದರ್ಶನ ಕೇಂದ್ರದ ಹಿಂಭಾಗದಲ್ಲಿರುವ ಫಾರ್ಮಾ ಭವನದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ ಸದಸ್ಯತ್ವ ನೋಂದಣಿ ಮಾಡಿಸಬಹುದು ಎಂದು ತಿಳಿಸಿದ್ದಾರೆ.

ಸದಸ್ಯತ್ವ ಹಾಗೂ ಅಭಿಯಾನ ಕುರಿತ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9448130728 ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net