ಬಸವ ಜಯಂತಿ ಉತ್ಸವ ಸಮಿತಿ ಕಚೇರಿ ಉದ್ಘಾಟನೆ

basav jayanti samiti
Published on

ಬೀದರ್: 2025ನೇ ಸಾಲಿನ ಬಸವ ಜಯಂತಿ ಉತ್ಸವ ಸಮಿತಿಯ ಕಚೇರಿಯನ್ನು ನಗರದ ಉದಗಿರ ರಸ್ತೆಯಲ್ಲಿ ಇರುವ ವಾಲಿ ಕಾಂಪ್ಲೆಕ್ಸ್‍ನಲ್ಲಿ ಶುಕ್ರವಾರ ಉದ್ಘಾಟಿಸಲಾಯಿತು.

ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಕಚೇರಿ ಉದ್ಘಾಟಿಸಿದರು. ಬಸವ ಸೇವಾ ಪ್ರತಿಷ್ಠಾನದ ಡಾ. ಗಂಗಾಂಬಿಕೆ ಅಕ್ಕ ಗುರು ಪೂಜೆ ನೆರವೇರಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ನಗರದಲ್ಲಿ ಅದ್ಧೂರಿಯಾಗಿ ಬಸವ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ. ಜಯಂತಿ ಯಶಸ್ವಿಗೆ ಭರದ ಸಿದ್ಧತೆಗಳು ನಡೆದಿವೆ ಎಂದು ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಜೈರಾಜ ಖಂಡ್ರೆ ಹೇಳಿದರು.

ಬಸವ ಜಯಂತಿ ಉತ್ಸವ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಡಾ. ವಿಜಯಶ್ರೀ ಬಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯಲಕ್ಷ್ಮಿ ಕೌಟಗೆ ಅವರನ್ನು ನೇಮಕ ಮಾಡಲಾಯಿತು.

ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ವೈಜಿನಾಥ ಕಮಠಾಣೆ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಜಾಗತಿಕ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಬುಳ್ಳಾ, ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಬಸವ ಜಯಂತಿ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜೀವಕುಮಾರ ಪಾಟೀಲ, ಖಜಾಂಚಿ ಡಾ. ರಜನೀಶ್ ವಾಲಿ, ಲಿಂಗಾಯತ ಬ್ರಿಗೇಡ್ ಜಿಲ್ಲಾ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ, ಮುಖಂಡರಾದ ದೀಪಕ್ ವಾಲಿ, ಪ್ರಭುರಾವ್ ವಸ್ಮತೆ, ಜಗದೀಶ್ ಖೂಬಾ, ಆನಂದ ದೇವಪ್ಪ, ಧನರಾಜ ಹಂಗರಗಿ, ಬಾಬುರಾವ್ ದಾನಿ, ವಿಜಯಕುಮಾರ ಪಾಟೀಲ ಯರನಳ್ಳಿ, ಬಸವರಾಜ ಭತಮುರ್ಗೆ, ಅರುಣ ಹೋತಪೇಟ್, ಸಿದ್ರಾಮಯ್ಯ ಸ್ವಾಮಿ, ಪ್ರಕಾಶ ಸಾವಳಗೆ, ಕಂಟೆಪ್ಪ ಗಂದಗುಡೆ, ಯೋಗೇಂದ್ರ ಯದಲಾಪುರೆ, ಶಾಂತಾ ಖಂಡ್ರೆ, ಸಂಗಪ್ಪ ಹಿಪ್ಪಳಗಾಂವ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net