ಜನಿವಾರ ಪ್ರಕರಣ ಹಿಂದೆ ಬಿಜೆಪಿ ಷಡ್ಯಂತ್ರ

aravindkumar arali
Published on

ಬೀದರ್: ಜನಿವಾರ ಕಾರಣಕ್ಕಾಗಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿ ಸಚಿವೃತ್ಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸದ ಪ್ರಕರಣವು ಬಿಜೆಪಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಷಡ್ಯಂತ್ರದಿಂದ ಆಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಆರೋಪಿಸಿದ್ದಾರೆ.

ವಿದ್ಯಾರ್ಥಿ ಸುಚಿವೃತ್ ಮೊಲನ ದಿನ ಪರೀಕ್ಷೆ ಬರೆಯಲು ಯಾವುದೇ ಸಮಸ್ಯೆಯಾಗಿಲ್ಲ. ಆದರೆ ಬೀದರ್ಗೆ ಬಿಜೆಪಿಯ ಜನಾಕ್ರೋಶ ಯಾತ್ರೆ ಬರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣ ಬೆಳಕಿಗೆ ಬರಲು ಕಾರಣವೇನು ? ಇದರ ಹಿಂದಿನ ಷಡ್ಯಂತ್ರ ಏನು ಎಂದು ಇಲ್ಲಿ ಹೊರಡಿಸಿರುವ ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.

ಸಚಿವೃತ್ ಜನಿವಾರದೊಂದಿಗೆ ಗೋಲಾಕರದ ಲೋಹದ ವಸ್ತು ಕಟ್ಟಿಕೊಂಡು ಬಂದಿದ್ದರು. ಅದನ್ನು ತೆಗೆಯಲು ಹೇಳಿದಕ್ಕೆ ವಿದ್ಯಾರ್ಥಿ ಪರೀಕ್ಷೆ ಬರೆಯದೆ ವಾಪಸ್ ಹೋಗಿದ್ದಾರೆ. ಈ ವಿಷಯ ಅರಿತ ಬಿಜೆಪಿಯವರು ಅದನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಇದಕ್ಕೆಲ್ಲ ಆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾರಣ.ರಾಜ್ಯ ಸರ್ಕಾರ ಜಾತಿ ಜನಗಣತಿ ವರದಿ ಜಾರಿ ಮಾಡುವ ಸಂದರ್ಭದಲ್ಲಿ ಬಿಜೆಪಿಯವರು ಈ ಕೆಲಸ ಮಾಡಿದ್ದಾರೆ. ಇದರ ಹಿಂದಿನ ರಾಜಕೀಯ ಪಿತೂರಿ ಬಗ್ಗೆ ಸರ್ಕಾರ ತನಿಖೆ ನಡೆಸಲು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net