ಭಯೋತ್ಪಾದಕರ ದಾಳಿ ಪೈಶಾಚಿಕ ಕೃತ್ಯ

Revansidda Jadar- New
Published on

ಬೀದರ್: ಕಾಶ್ಮೀರದ ಪಹಲ್ಗಾಮ್ ಪಟ್ಟಣ ಸಮೀಪದ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿ ಅತ್ಯಂತ ಪೈಶಾಚಿಕ ಕೃತ್ಯ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಿರಿಯ ಮುಖಂಡ ರೇವಣಸಿದ್ದಪ್ಪ ಜಾಡರ್ ಕಟು ಶಬ್ದಗಳಲ್ಲಿ ಟೀಕಿಸಿದ್ದಾರೆ. ಘಟನೆ ತೀವ್ರ ಖಂಡನೀಯ ಇಡೀ ಮಾನವ ಕುಲ ತಲೆ ತಗ್ಗಿಸುವಂಥದ್ದು ಎಂದು ತಿಳಿಸಿದ್ದಾರೆ.

ಭಯೋತ್ಪಾದಕರ ದಾಳಿ ಪೂರ್ವ ನಿಯೋಜಿತ. ಧರ್ಮ ಕೇಳಿ ಪ್ರವಾಸಿಗರನ್ನು ಕೊಂದಿರುವುದು ಅನಾಗರಿಕ ಎಂದು ಹೇಳಿದ್ದಾರೆ.

ಭಾರತದಲ್ಲಿ ಧರ್ಮ ಆಧಾರಿತ ಕ್ರೌರ್ಯಗಳು ಕೊನೆಗೊಳ್ಳಬೇಕು. ಕೇಂದ್ರ ಸರ್ಕಾರ ಈ ದಿಸೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕಲು ಭಯೋತ್ಪಾದಕರ ತಾಣಗಳ ಮೇಲೆ ಸರ್ಜಿಕಲ್ ದಾಳಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net