ವಚನ ಮಂಟಪ, ಪಟ್ಟದ್ದೇವರ ಸ್ಮರಣೆ 27ರಂದು

Basavaraj Dhannur - Copy
Published on

ಬೀದರ್: ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 27 ರಂದು ಸಂಜೆ 6ಕ್ಕೆ ವಚನ ಮಂಟಪ ಮಾಸಿಕ ಚಿಂತನ-ಮಂಥನ ಹಾಗೂ ಡಾ. ಚನ್ನಬಸವ ಪಟ್ಟದ್ದೇವರ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಜೈರಾಜ ಖಂಡ್ರೆ ಉದ್ಘಾಟಿಸುವರು. ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಸಾನಿಧ್ಯ, ಸಂಚಾಲಕ ಶಿವಾನಂದ ಸ್ವಾಮೀಜಿ ಸಮ್ಮುಖ ವಹಿಸುವರು. ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಅಧ್ಯಕ್ಷತೆ ವಹಿಸುವರು.

ಡಾ. ಚನ್ನಬಸವ ಪಟ್ಟದ್ದೇವರ ಜೀವನ ಕುರಿತು ಸಾಹಿತಿ ಡಾ. ಸೋಮನಾಥ ಯಾಳವಾರ ಉಪನ್ಯಾಸ ನೀಡುವರು. ಚಿಂತಕ ಶಿವಲಿಂಗ ಹೇಡೆ ಅನುಭಾವ ಮಂಡಿಸುವರು.

ಬಸವ ಜಯಂತಿ ಉತ್ಸವ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆ ಡಾ. ವಿಜಯಶ್ರೀ ಬಶೆಟ್ಟಿ, ಸಮಿತಿಯ  ಪ್ರಧಾನ ಕಾರ್ಯದರ್ಶಿ ಸಂಜುಕುಮಾರ ಪಾಟೀಲ, ಕೋಶಾಧ್ಯಕ್ಷ ಡಾ. ರಜನೀಶ್ ವಾಲಿ, ದತ್ತಗಿರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಹತ್ತಿ, ದಿ. ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಭಗವಂತ ಔದತ್ತಪುರ, ಬಸವ ಜಯಂತಿ ಉತ್ಸವ ಸಮಿತಿಯ ಮಹಿಳಾ ಘಟಕದ ಕಾರ್ಯದರ್ಶಿ ವಿಜಯಲಕ್ಷ್ಮಿ ಕೌಟಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ವಚನಶ್ರೀ ಚನ್ನಬಸಪ್ಪ ನೌಬಾದೆ ವಚನ ಗಾಯನ ಮಾಡುವರು. ರೇಣುಕಾ ಟ್ರೇಡಿಂಗ್ ಕಂಪನಿಯ ಮುಖ್ಯಸ್ಥ ಅಶೋಕ ಭಕ್ತಿ ದಾಸೋಹಗೈಯುವರು.

ಬಸವಾನುಯಾಯಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net