ಹೇಮರೆಡ್ಡಿ ಮಲ್ಲಮ್ಮ ಜಯಂತಿ ಮೇ 10ರಂದು

Shankar Reddy
Published on

ಬೀದರ್: ಜಿಲ್ಲಾ ರೆಡ್ಡಿ ಸಮಾಜವು ನಗರದಲ್ಲಿ ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ.

ನಗರದ ಅಮಲಾಪುರ ರಸ್ತೆಯಲ್ಲಿ ಇರುವ ಹೇಮರೆಡ್ಡಿ ಮಲ್ಲಮ್ಮ ಮಂದಿರದಲ್ಲಿ ನಡೆದ ಜಯಂತಿ ಆಚರಣೆ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಸಮಾಜದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ ಈ ಮಾಹಿತಿ ನೀಡಿದರು.

ಅಂದು ಬೆಳಿಗ್ಗೆ 7.35ಕ್ಕೆ ಪಾಪನಾಶ ಮಂದಿರದಿಂದ ಹೇಮರೆಡ್ಡಿ ಮಲ್ಲಮ್ಮ ಮಂದಿರದ ವರೆಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ರ್ಯಾಲಿ ಕೇಂದ್ರ ಬಸ್ ನಿಲ್ದಾಣ, ಮಡಿವಾಳ ಮಾಚಿದೇವ ವೃತ್ತ, ನೆಹರೂ ಕ್ರೀಡಾಂಗಣ, ಜಿಲ್ಲಾ ಆಸ್ಪತ್ರೆ ಕ್ರಾಸ್, ಹರಳಯ್ಯ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಲಿದೆ. ಅಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪೂಜೆ ಕಾರ್ಯಕ್ರಮದ ನಂತರ ಹೇಮರೆಡ್ಡಿ ಮಲ್ಲಮ್ಮ ಮಂದಿರಕ್ಕೆ ತೆರಳಲಿದೆ. ಮಂದಿರದಲ್ಲಿ ಮಧ್ಯಾಹ್ನ 12.30ಕ್ಕೆ ಜಿಲ್ಲಾಡಳಿತದಿಂದ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ಮೇ 9 ರಂದು ಸಂಜೆ 5.45ಕ್ಕೆ ಸಿದ್ಧಾರೂಢ ಮಂದಿರದಿಂದ ಮಲ್ಲಮ್ಮ ಮಂದಿರದ ವರೆಗೆ ಕುಂಭ ಕಳಸ ಹೊತ್ತ ಮಹಿಳೆಯರ ಮೆರವಣಿಗೆ ಜರುಗಲಿದೆ. ರಾತ್ರಿ 8.15ಕ್ಕೆ ದೀಪೋತ್ಸವ ನಡೆಯಲಿದೆ ಎಂದು ತಿಳಿಸಿದರು.

ಸಮಾಜದ ಗೌರವಾಧ್ಯಕ್ಷ ಸಂಗ್ರಾಮ ರೆಡ್ಡಿ, ಉಪಾಧ್ಯಕ್ಷ ರಾಜರೆಡ್ಡಿ ಶೇರಿಕಾರ್, ನಗರಸಭೆ ಸದಸ್ಯ ರಾಜು ಚಿಂತಾಮಣಿ, ಪ್ರಮುಖರಾದ ಗೋಪಾಲ್ ರೆಡ್ಡಿ, ಸಂಜು ರೆಡ್ಡಿ, ಪೆಂಟಾರೆಡ್ಡಿ, ಬಸವರಾಜ ಕೊಡಂಬಲ್, ವೆಂಕಟ ರೆಡ್ಡಿ, ವಿಜಯಕುಮಾರ ರೆಡ್ಡಿ, ಅಶೋಕ ರೆಡ್ಡಿ, ಕೃಷ್ಣಾರೆಡ್ಡಿ, ರವಿ ರೆಡ್ಡಿ, ಜಗನ್ನಾಥ ರೆಡ್ಡಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net