ಮಹಾಸಭೆ ನಿರ್ಧಾರಕ್ಕೆ ಸ್ವಾಗತ

babu wali
Published on

ಬೀದರ್: ವಿಶ್ವಗುರು ಬಸವಣ್ಣನವರ ಜಯಂತಿ ದಿನದಂದು ಪಂಚಾಚಾರ್ಯರ ಯುಗಮಾನೋತ್ಸವ ಆಚರಿಸದಿರಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ನಿರ್ಧಾರವನ್ನು ಭಾರತೀಯ ಬಸವ ಬಳಗದ ರಾಜ್ಯಾಧ್ಯಕ್ಷ ಬಾಬು ವಾಲಿ ಸ್ವಾಗತಿಸಿದ್ದಾರೆ.

ಬಸವ ಜಯಂತಿಯೊಂದಿಗೆ ಯುಗಮಾನೋತ್ಸವ ಆಚರಣೆ ನಿರ್ಧಾರ ವಾಪಸ್ ಪಡೆಯುವಂತೆ ನಗರದಲ್ಲಿ ಪೂಜ್ಯರ ನೇತೃತ್ವದಲ್ಲಿ ಬೃಹತ್ ಹೋರಾಟ ಮಾಡಲಾಗಿತ್ತು. ಮಹಾಸಭೆ ಪ್ರಧಾನ ಕಾರ್ಯದರ್ಶಿಯೂ ಆದ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿತ್ತು. ಬಸವ ಜಯಂತಿ ಮತ್ತು ಪಂಚಾಚಾರ್ಯರ ಯುಗಮಾನೋತ್ಸವ ಪ್ರತ್ಯೇಕವಾಗಿ ಆಚರಿಸುವ ನಿರ್ಧಾರ ಮಹಾಸಭೆ ಕೈಗೊಂಡಿದ್ದು ಖುಷಿ ತಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net