ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರ ಅಳವಡಿಸಿ

Ganesh patil
Published on

ಬೀದರ್: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಾಂಸ್ಕøತಿಕ ನಾಯಕ ಬಸವಣ್ಣನವರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಒತ್ತಾಯಿಸಿದ್ದಾರೆ.

ಈ ಕುರಿತು ಅವರು ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದ್ದಾರೆ.

ಸರ್ಕಾರ ಎಲ್ಲ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಅನುದಾನಿತ ಸಂಘ ಸಂಸ್ಥೆಗಳು, ಬ್ಯಾಂಕ್‍ಗಳಲ್ಲಿ ಬಸವೇಶ್ವರರ ಭಾವಚಿತ್ರ ಅಳವಡಿಸಬೇಕು ಎಂದು ಆದೇಶಿಸಿದೆ. ಆದರೆ, ಕೆಲ ಕಚೇರಿ ಹಾಗೂ ಬ್ಯಾಂಕ್‍ಗಳಲ್ಲಿ ಭಾವಚಿತ್ರ ಅಳವಡಿಸಿಲ್ಲ ಎಂದು ದೂರಿದ್ದಾರೆ.

ಜಿಲ್ಲಾಧಿಕಾರಿ ಅವರು ಎಲ್ಲ ಕಚೇರಿಗಳಲ್ಲಿ ಭಾವಚಿತ್ರ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net