ಬಸವಗಿರಿಯಲ್ಲಿ ಬಸವ ಜಯಂತಿ ಆಚರಣೆ

Basavagiri - Copy
Published on

ಬೀದರ್: ಇಲ್ಲಿಯ ಬಸವಗಿರಿಯಲ್ಲಿ ಲಿಂಗಾಯತ ಮಹಾ ಮಠದ ವತಿಯಿಂದ ಬುಧವಾರ ಶ್ರದ್ಧೆ, ಭಕ್ತಿಯಿಂದ ಕರ್ನಾಟಕದ ಸಾಂಸ್ಕøತಿಕ ನಾಯಕ ಬಸವಣ್ಣನವರ ಜಯಂತಿ ಆಚರಿಸಲಾಯಿತು.

ನೀಲಮ್ಮನ ಬಳಗದ ಸದಸ್ಯೆಯರಿಂದ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ, ಸಾಮೂಹಿಕ ಪ್ರಾರ್ಥನೆ ಹಾಗೂ ತೊಟ್ಟಿಲು ಕಾರ್ಯಕ್ರಮಗಳು ನೆರವೇರಿದವು.

ಸಾನಿಧ್ಯ ವಹಿಸಿದ್ದ ಪ್ರಭುದೇವ ಸ್ವಾಮೀಜಿ ಮಾತನಾಡಿ, ಬಸವಣ್ಣ 12ನೇ ಶತಮಾನದಲ್ಲಿ ಜಾತಿ, ವರ್ಗ, ವರ್ಣ ರಹಿತ, ಧರ್ಮ ಸಹಿತ ಕಲ್ಯಾಣ ರಾಜ್ಯ ಕಟ್ಟಿದ್ದರು ಎಂದು ನುಡಿದರು.

ಸ್ತ್ರೀ ಸ್ವಾತಂತ್ರ್ಯದ ರೂವಾರಿಯಾಗಿದ್ದರು. ಅಂದಿನ ಕಾಲದಲ್ಲಿ ಮಹಿಳೆಯರು ಧಾರ್ಮಿಕವಾಗಿ ಅಸ್ಪøಶ್ಯರಾಗಿದ್ದರು. ಅವರಿಗೆ ಪೂಜೆ, ಪ್ರಾರ್ಥನೆಗಳಲ್ಲಿ ಪಾಲ್ಗೊಳ್ಳುವ ಸ್ವಾತಂತ್ರ್ಯ ಕಲ್ಪಿಸಿದವರು ಬಸವಣ್ಣ ಎಂದು ಬಣ್ಣಿಸಿದರು.

ಡಾ.ಎಸ್.ಎಸ್. ಸಿದ್ದಾರೆಡ್ಡಿ ಫೌಂಡೇಷನ್ ಅಧ್ಯಕ್ಷೆ ಗುರಮ್ಮ ಸಿದ್ದಾರೆಡ್ಡಿ, ನೀಲಮ್ಮನ ಬಳಗದ ನೀಲಮ್ಮ ರೂಗನ್, ಸಂಗೀತಾ ಗಣಾಚಾರಿ, ಶಾಮಲಾ ಎಲಿ, ನೀಲಾಂಬಿಕಾ ಮಠಪತಿ, ಶ್ರೀದೇವಿ ಶರಣಬಸವ, ಪ್ರಭಾವತಿ ಗೋರನಾಳೆ, ಸಾಹಿತಿ ರಮೇಶ ಮಠಪತಿ, ಪ್ರಮುಖರಾದ ಮಾಣಿಕಪ್ಪ ಗೋರನಾಳೆ, ರಾಜಕುಮಾರ ಪಾಟೀಲ, ಅಶೋಕ ಎಲಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net