

ಬೀದರ್: ನಗರದ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಬುದ್ಧ ಪೂರ್ಣಿಮೆ ಆಚರಿಸಲಾಯಿತು.
ಕಾಲೇಜು ಅಧ್ಯಕ್ಷ ಡಾ. ಚಂದ್ರಕಾಂತ ಪಾಟೀಲ ಚಿಮಕೋಡ್ ಅವರು ಗೌತಮ ಬುದ್ಧರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ವಿಶ್ವದಲ್ಲಿ ಶಾಂತಿ, ನೆಮ್ಮದಿಗಾಗಿ ಗೌತಮ ಬುದ್ಧರ ತತ್ವಗಳನ್ನು ಪಾಲಿಸಬೇಕು ಎಂದು ಅವರು ಹೇಳಿದರು.
ಕಾಲೇಜು ನಿರ್ದೇಶಕಿ ಕಲ್ಪನಾ ಮಠಪತಿ, ಪ್ರಾಚಾರ್ಯೆ ಮಂಗಲಾ ಎನ್.ಎಂ., ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.