ಸಿದ್ಧಾರೂಢ ಪಬ್ಲಿಕ್ ಶಾಲೆಗೆ ಶೇ.100 ಫಲಿತಾಂಶ

Published on
ಬೀದರ್: ನಗರದ ಚಿದಂಬರ ಶಿಕ್ಷಣ ಸಂಸ್ಥೆಯ ಸಂಚಾಲಿತ ಶ್ರೀ ಸಿದ್ಧಾರೂಢ ಪಬ್ಲಿಕ್ ಶಾಲೆಗೆ ಪ್ರಸಕ್ತ ವರ್ಷದ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100ರಷ್ಟು ಫಲಿತಾಂಶ ಲಭಿಸಿದೆ.
ಪರೀಕ್ಷೆ ಬರೆದ 41 ವಿದ್ಯಾರ್ಥಿಗಳಲ್ಲಿ 25 ಅಗ್ರಶ್ರೇಣಿ, 6 ಪ್ರಥಮ ದರ್ಜೆ ಹಾಗೂ 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ಶೇ 91 ರಷ್ಟು ಅಂಕ ಗಳಿಸಿದ ಪಾವನಿ ಪವಾರ್ ಶಾಲೆಗೆ ಮೊದಲಿಗರಾಗಿದ್ದಾರೆ ಎಂದು ಪ್ರಾಚಾರ್ಯೆ ಅಂಜು ಪ್ರಾಜೇಶ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಚಿದಂಬರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಶಿವಕುಮಾರ ಸ್ವಾಮೀಜಿ, ಆಡಳಿತಾಧಿಕಾರಿ ಹಾವಗಿರಾವ್ ಮೈಲಾರೆ ಹಾಗೂ ಶಾಲೆಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net