ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Dr B.R. Ambedkar Hostel- Aurad
Published on

ಬೀದರ್: ಸಮಾಜ ಕಲ್ಯಾಣ ಇಲಾಖೆ ಅಧೀನದ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 2025-26ನೇ ಸಾಲಿಗೆ ಹೊಸದಾಗಿ ಪ್ರವೇಶಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಔರಾದ್, ಕಮಲನಗರ, ದಾಬಕಾದ ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ, ಔರಾದ್‍ನ ಬಾಲಕಿಯರ ವಸತಿ ನಿಲಯ, ಸಂತಪುರ ಹಾಗೂ ಔರಾದ್‍ನ ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಹಾಗೂ ಕಮಲನಗರದ ಬಾಲಕಿಯರ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಔರಾದ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ತಿಳಿಸಿದ್ದಾರೆ.

5 ರಿಂದ 10ನೇ ತರಗತಿ ವರೆಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ, ಪಿಯುಸಿ, ಪದವಿ, ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಆನ್‍ಲೈನ್‍ನಲ್ಲಿ ಮಾಹಿತಿ ಅಪ್‍ಲೋಡ್ ಮಾಡಿದ ನಂತರ ಅರ್ಜಿಯ ಮುದ್ರಿತ ಪ್ರತಿ ಪಡೆದು, ತೇರ್ಗಡೆಯಾದ ತರಗತಿಯ ಅಂಕಪಟ್ಟಿ, ಜಾತಿ, ಆದಾಯ ಪ್ರಮಾಣ ಪತ್ರ, ಎಸ್‍ಎಸ್‍ಪಿ ವಿದ್ಯಾರ್ಥಿ ಐಡಿ, ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ವಿದ್ಯಾರ್ಥಿ ಐಡಿ/ಸ್ಯಾಟ್ ಐಡಿ ಝೆರಾಕ್ಸ್ ಪ್ರತಿಗಳೊಂದಿಗೆ ಪ್ರವೇಶ ಪಡೆಯ ಬಯಸುವ ವಸತಿ ನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net