

ಬೀದರ್: ಉತ್ತಮ ಸೇವೆಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಶಂಕರ ಕಾಮಶೆಟ್ಟಿ ಅವರಿಗೆ ಅತ್ಯುತ್ತಮ ಸರ್ಕಾರಿ ಅಧಿಕಾರಿ ಪ್ರಶಸ್ತಿ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಜಾನಸನ್ ಘೋಡೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.
ಕಾಮಶೆಟ್ಟಿ ಅವರು ಹುದ್ದೆ ವಹಿಸಿಕೊಂಡ ನಂತರ ಜಿಲ್ಲೆಯಲ್ಲಿ ನನೆಗುದಿಗೆ ಬಿದ್ದಿದ್ದ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಕಾಮಗಾರಿ ಅನುಷ್ಠಾನಕ್ಕೆ ಮುತುವರ್ಜಿ ವಹಿಸಿದ ಅವರಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.