

ಹುಮನಾಬಾದ್: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಬೀದರ್ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ತಾಲೂಕಿನ ಹಳ್ಳಿಖೇಡ್ (ಬಿ) ಗ್ರಾಮದ ವಿಲಾಸಕುಮಾರ ಬಾಬುರಾವ ಬೆಳಕೇರಿ ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮ ನಿರ್ದೇಶನ ಗೊಳಿಸಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಎಜಾಸ್ ಪಾಷ ಆದೇಶ ಹೊರಡಿಸಿದ್ದಾರೆ.