ವಿಜ್ಞಾನ ತಂತ್ರಜ್ಞಾನಕ್ಕೆ ಆದ್ಯತೆ ಕೊಡಿ

Appa collage
Published on

ಬೀದರ್: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಸೆವೆಂತ್ ಸೆನ್ಸ್ ಟ್ಯಾಲೆಂಟ್ ಸೊಲ್ಯೂಷನ್ ರಿಜನಲ್ ಮ್ಯಾನೇಜರ್ ಕೊಟ್ರೇಶ್ ಹೇಳಿದರು.

ನಗರ ಹೊರವಲಯದ ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಪದವಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಭವಿಷ್ಯದಲ್ಲಿ ತಂತ್ರಜ್ಞಾನದತ್ತ ಹೆಚ್ಚು ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.

ಕಾಲೇಜಿನ ನಿರ್ದೇಶಕಿ ಡಾ.ಉಮಾತಾಯಿ ದೇಶಮುಖ ಉದ್ಘಾಟಿಸಿ ಮಾತನಾಡಿ, ಶರಣಬಸವೇಶ್ವರ ಸಂಸ್ಥೆಯ ಜ್ಞಾನದ ಬಾಗಿಲು ಬಡ ವಿದ್ಯಾರ್ಥಿಗಳ ಸೇವೆಗೆ ಸದಾ ಸಿದ್ಧವಾಗಿದೆ ಎಂದರು.

ಶರಣಬಸವೇಶ್ವರ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಪ್ರತಾಪುರ ಮಾತನಾಡಿ, ಜೀವನದ ಪ್ರತಿ ಹಂತದಲ್ಲಿ ಸ್ಪರ್ಧೆ ಇರುತ್ತದೆ. ವಿದ್ಯಾರ್ಥಿಗಳು ಇದನ್ನು ಮೆಟ್ಟಿ ನಿಲ್ಲಬೇಕು ಎಂದು ಸಲಹೆ ನೀಡಿದರು.

ಪ್ರಾಚಾರ್ಯೆ ಡಾ.ವಿನಿತಾ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಜೀವನದಲ್ಲಿ ಮುಂದೆ ಬರಬೇಕು. ಗುಣಮಟ್ಟದ ಶಿಕ್ಷಣದಿಂದ ಕಾಲೇಜು ಜಿಲ್ಲೆಯಲ್ಲಿ ಹೆಸರು ಮಾಡಿದೆ ಎಂದು ತಿಳಿಸಿದರು.

ದೇವಪ್ಪ ಚಾಂಬೋಳೆ ಮಾತನಾಡಿದರು. ಸಹನಾ ಪಾಟೀಲ್ ನಿರೂಪಣೆ ಮಾಡಿದರು. ವಿಜಯಾನಂದ ಕಪ್ಟೆ ಸ್ವಾಗತಿಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಇದ್ದರು. ಐದು ವಿಭಾಗಗಳಲ್ಲಿ ಹೆಚ್ಚು ಅಂಕದೊಂದಿಗೆ ಪ್ರಥಮ, ದ್ವಿತೀಯ ಸ್ಥಾನ ಪಡೆದವರಿಗೆ ಪದಕ ಹಾಗೂ ಪದವಿ ಪ್ರಮಾಣಪತ್ರ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net