ವಿಮಾನ ಅಪಘಾತ ವಿಷಾದಕರ

Dhanraj Talampalli
Published on

ಬಸವಕಲ್ಯಾಣ: ಗುಜರಾತ್‌ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಸಾಕಷ್ಟು ಜನರು ಸಾವಿಗೀಡಾಗಿದ್ದು ಬಹಳಷ್ಟು ನೋವು ತಂದಿದೆ ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ ತಾಳಂಪಳ್ಳಿ ತಿಳಿಸಿದ್ದಾರೆ.

ಅಹಮದಾಬಾದ್ ನಿಂದ ಲಂಡನ್‌ಗೆ ತೆರಳುತ್ತಿದ್ದ ವಿಮಾನ ಟೇಕಾಫ್ ಬಳಿಕ ನಿಲ್ದಾಣ ಹೊರವಲಯದಲ್ಲಿ ಪತನಗೊಂಡಿದೆ. ಭಾರತ ಸೇರಿ ವಿವಿಧ ದೇಶದ ಜನ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ನೋವು ತಡೆದುಕೊಳ್ಳುವ ಶಕ್ತಿ ದೇವರು ನೀಡಬೇಕು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net