ಸಹಕಾರ ಸಚಿವರ ಅಭಿನಂದನಾ ಗ್ರಂಥ ಲೋಕಾರ್ಪಣೆ 21ಕ್ಕೆ

Mallikarjun Biradar
Published on

ಬೀದರ್: ತುಮಕೂರಿನ ಬಿ.ಎಚ್. ರಸ್ತೆಯಲ್ಲಿ ಇರುವ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಜೂನ್ 21 ರಂದು ಬೆಳಿಗ್ಗೆ 10ಕ್ಕೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ 75ನೇ ಜನ್ಮದಿನದ ಪ್ರಯುಕ್ತ ಅಮೃತ ಮಹೋತ್ಸವ ಸಮಾರಂಭ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ ತಿಳಿಸಿದ್ದಾರೆ.

ಸಮಾರಂಭದಲ್ಲಿ ಜಿಲ್ಲೆಯ ಸಹಕಾರಿಗಳು, ಸಹಕಾರ ಸಂಘ- ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net