ಸಂಘಟನೆ ಕಚೇರಿಗೆ ನಿವೇಶನ ಒದಗಿಸಿ

Karnataka Patrakartar Dhwani Memorandum
Published on

ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಕಚೇರಿಗೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಒದಗಿಸಬೇಕು ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ಮನವಿ ಮಾಡಿದ್ದಾರೆ.

ಈ ಕುರಿತು ಅವರು ಬೆಂಗಳೂರಿನಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಘಟನೆ ರಾಜ್ಯದಾದ್ಯಂತ ಸಾರ್ವಜನಿಕ ಹಿತದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಗಮನ ಸೆಳೆದರು.

ನಿವೇಶನ ಒದಗಿಸಿದ್ದಲ್ಲಿ ಸಂಘಟನೆ ಕಚೇರಿ ಆರಂಭಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net