

ಬೀದರ್: ಸೂರ್ಯ ನಮಸ್ಕಾರ ಸಂಘವು ರೋಟರಿ ಕ್ಲಬ್‍ಗಳ ಸಹಯೋಗದಲ್ಲಿ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಜೂನ್ 21 ರಂದು ಬೆಳಿಗ್ಗೆ 6ಕ್ಕೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಆಶ್ರಮದ ಅಧ್ಯಕ್ಷ ಜ್ಯೋತಿರ್ಮಯಾನಂದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಸೂರ್ಯ ನಮಸ್ಕಾರ ಸಂಘದ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ ಅಧ್ಯಕ್ಷತೆ ವಹಿಸುವರು. ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಶಿವಕುಮಾರ ಪಾಖಾಲ್, ರೋಟರಿ ಕ್ಲಬ್ ಆಫ್ ಬೀದರ್ ಅಧ್ಯಕ್ಷ ಸೋಮಶೇಖರ ಪಾಟೀಲ, ರೋಟರಿ ಕ್ಲಬ್ ಆಫ್ ಬೀದರ್ ಫೋರ್ಟ್ ಅಧ್ಯಕ್ಷ ಗುಂಡಪ್ಪ ಘೋದೆ, ಲಘು ಉದ್ಯೋಗ ಭಾರತಿ ಅಧ್ಯಕ್ಷ ಸಚ್ಚಿದಾನಂದ ಚಿದ್ರೆ, ಗ್ಲೊಬಲ್ ಫ್ರೆಂಡ್ಸ್ ಅಸೋಸಿಯೇಷನ್ ಅಧ್ಯಕ್ಷ ಶರಣು ಚಳಕಾಪುರೆ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಯೋಗ ತರಬೇತುದಾರರಾದ ಶಿವಲೀಲಾ ಚಿದ್ರೆ, ಸತ್ಯಪ್ರಕಾಶ ಹಾಗೂ ಡಾ. ಲೋಕೇಶ ಹಿರೇಮಠ ಯೋಗದ ವಿವಿಧ ಪ್ರಕಾರಗಳನ್ನು ಹೇಳಿಕೊಡುವರು.
ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸೂರ್ಯ ನಮಸ್ಕಾರ ಸಂಘದ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ ಮನವಿ ಮಾಡಿದ್ದಾರೆ.