ಸಿಇಟಿ ಸೀಟು ಹಂಚಿಕೆ ಕಾರ್ಯಾಗಾರ 28ರಂದು

Published on

ಬೀದರ್: ಇಲ್ಲಿಯ ಮೈಲೂರು ರಸ್ತೆಯಲ್ಲಿನ ಗಾಂಧಿನಗರದಲ್ಲಿ ಇರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 28 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರ ವರೆಗೆ ಯು.ಜಿ. ಸಿಇಟಿ ಸೀಟು ಹಂಚಿಕೆ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ವಿವಿಧ ಕೋರ್ಸ್‍ಗಳು ಹಾಗೂ ಕಾಲೇಜುಗಳ ಮಾಹಿತಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಯೋಗದೊಂದಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಕಾಲೇಜು ಪ್ರಾಚಾರ್ಯ ಡಾ. ದೇವೇಂದ್ರ ಹಂಚೆ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net