ಅಧಿಕಾರಿಗಳ ಅಮಾನತಿಗೆ ಆಗ್ರಹ

Published on

ಬೀದರ್: ಅವ್ಯವಹಾರದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಲೆಕ್ಕಾಧಿಕಾರಿ ಹಾಗೂ ಆಡಳಿತ ಸಹಾಯಕ ನಿರ್ದೇಶಕ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಕರ್ನಾಟಕ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ಆಗ್ರಹಿಸಿದ್ದಾರೆ.

ಅವರು ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ. ಇಬ್ಬರೂ ಅಧಿಕಾರಿಗಳು ಹಲವು ವರ್ಷಗಳಿಂದ ಬೀದರ್‍ನಲ್ಲೇ ಬಿಡಾರ ಹೂಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net