ವಿದ್ಯಾರ್ಥಿ ವೇತನ ಅಭಿಯಾನ

Aurad Social Welfare Office Vidyarthi Vetan Abhiyan
Published on

ಬೀದರ್: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಔರಾದ್ ಪಟ್ಟಣದಲ್ಲಿ ವಿದ್ಯಾರ್ಥಿ ವೇತನ ಅಭಿಯಾನ ನಡೆಯಿತು.

ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಹಾಗೂ ಸಿಬ್ಬಂದಿ ಪಟ್ಟಣದ ಬೌದ್ಧನಗರ, ನಾಲಂದಾ ಪದವಿಪೂರ್ವ ಕಾಲೇಜು, ಪರಿಶಿಷ್ಟ ಜಾತಿ ಅಲೆಮಾರಿ ಕಾಲೊನಿ ಹಾಗೂ ಜನತಾ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯ, ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನದ ಕುರಿತು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಮಾಹಿತಿ ನೀಡಿದರು.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಗೆ ವಸತಿ ನಿಲಯಗಳ ಪ್ರಯೋಜನ ಪಡೆಯಬೇಕು. ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ ಸೇರಿದಂತೆ ವಿವಿಧ ಸೌಲಭ್ಯಗಳಿವೆ. ಅಧ್ಯಯನಕ್ಕೆ ಒಳ್ಳೆಯ ವಾತಾವರಣವೂ ಇದೆ ಎಂದು ಅನಿಲಕುಮಾರ ಮೇಲ್ದೊಡ್ಡಿ ತಿಳಿಸಿದರು.

ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಪ್ರೋತ್ಸಾಹ ಧನ ಸೌಲಭ್ಯ ಇದೆ. ಮೊದಲ ಯತ್ನದಲ್ಲಿ ಸ್ನಾತಕೋತ್ತರ ಪದವಿ, ಸ್ನಾತಕ ಪದವಿ, ಪಿಯುಸಿ, ಎಸ್‍ಎಸ್‍ಎಲ್‍ಸಿಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದವರಿಗೆ ರೂ. 7,500 ರಿಂದ ರೂ. 40 ಸಾವಿರ ವರೆಗೆ ಪ್ರೋತ್ಸಾಹ ಧನ ಕೊಡಲಾಗುತ್ತಿದೆ ಎಂದು ಹೇಳಿದರು.

ಪ್ರಥಮ ದರ್ಜೆ ಸಹಾಯಕ ಸತೀಶ್ ಕುಂದನ್, ದ್ವಿತೀಯ ದರ್ಜೆ ಸಹಾಯಕ ಖದೀರ್, ವಾರ್ಡನ್ ಪ್ರಿಯಾಂಕ ಶಾಸವಲ್ಲಿ, ಸಿಬ್ಬಂದಿ ಶ್ರೀಮಂತ, ಸಂತೋಷ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net