ಕಂದಗೂಳೆ ರಾಜ್ಯ ಪ್ರಧಾನ ಕಾರ್ಯದರ್ಶಿ

Rajkumar Kandgule
Published on

ಬೀದರ್: ಜಿಲ್ಲೆಯ ರಾಜಕುಮಾರ ಕಂದಗೂಳೆ ಅವರನ್ನು ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ವಿಭಾಗದ ರಾಜ್ಯ ಅಧ್ಯಕ್ಷ ವಿಜಯ ನಾಯಕ್ ಎಂ. ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಔರಾದ್ ತಾಲ್ಲೂಕಿನ ಕರಂಜಿ(ಬಿ) ಗ್ರಾಮದ ರಾಜಕುಮಾರ ಕಂದಗೂಳೆ 18 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದರ ಫಲವಾಗಿ ಅವರಿಗೆ ಈಗ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ಒಲಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net