ಗೋಪಿ ತಾಂದಳೆಗೆ ಛಾಯಾರತ್ನ ಪ್ರಶಸ್ತಿ ಪ್ರದಾನ

Gopichand Tandle -3
Published on

ಬೀದರ್: ಜಿಲ್ಲೆಯ ಪತ್ರಿಕಾ ಛಾಯಾಗ್ರಾಹಕ ಗೋಪಿಚಂದ್ ತಾಂದಳೆ ಅವರಿಗೆ ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕ ವಿಡಿಯೋ ಮತ್ತು ಫೊಟೋ ಅಸೋಸಿಯೇಷನ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಚಿತ್ರಕಾರರ ಸಂಘದ ವತಿಯಿಂದ ಅರಮನೆ ಮೈದಾನದಲ್ಲಿ ನಡೆದ ‘ಫೊಟೋ ಟುಡೆ’ ವಸ್ತು ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶಸ್ತಿ ನೀಡಿ ಗೌರವಿಸಿದರು.

ಬಿ.ಇ. ಮೆಕ್ಯಾನಿಕಲ್ ಪದವೀಧರರಾದ ಗೋಪಿಚಂದ್ ತಾಂದಳೆ 25 ವರ್ಷಗಳಿಂದ ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರಳತೆ, ಸೌಜನ್ಯಕ್ಕೆ ಹೆಸರಾಗಿದ್ದಾರೆ.

ಪತ್ರಿಕಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಲಭಿಸಿದೆ. ತಾಂದಳೆ ಅವರಿಗೆ ಬೀದರ್ ಜಿಲ್ಲಾಡಳಿತದ ರಾಜ್ಯೋತ್ಸವ ಪ್ರಶಸ್ತಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಅನೇಕ ಪ್ರಶಸ್ತಿ, ಸಮ್ಮಾನಗಳು ಸಂದಿವೆ.

ಪ್ರಶಸ್ತಿ ದೊರೆತಿದ್ದರಿಂದ ಸಂತಸವಾಗಿದೆ. ಪತ್ರಿಕಾ ರಂಗದಲ್ಲಿ ಇನ್ನಷ್ಟು ಉತ್ಸಾಹದಿಂದ ಸೇವೆ ಸಲ್ಲಿಸಲು ಪ್ರೇರಣೆ ದೊರೆತಿದೆ ಎಂದು ತಾಂದಳೆ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net