ಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 13ಕ್ಕೆ

Santosh Joldapke - Copy
Published on

ಬೀದರ್: ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜುಲೈ 13 ರಂದು ಬೆಳಿಗ್ಗೆ 10ಕ್ಕೆ ಗೊಂಡ(ಕುರುಬ) ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಪ್ರದಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ, ಜೆಇಇ, ನೀಟ್, ಕೆಸಿಟಿಯಲ್ಲಿ ಸಾಧನೆಗೈದ ಗೊಂಡ (ಕುರುಬ) ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಖ್ಯಾತ ಕಲಾವಿದರು ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಜೋಳದಾಪಕೆ ತಿಳಿಸಿದ್ದಾರೆ.

ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕೂ ಅಧಿಕ ಅಂಕ ಗಳಿಸಿದ, ಜೆಇಇ, ನೀಟ್ ಹಾಗೂ ಕೆಸಿಇಟಿಯಲ್ಲಿ ಉತ್ತಮ ರ್ಯಾಂಕ್ ಪಡೆದ ಸಮಾಜದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ದೃಢೀಕೃತ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳೊಂದಿಗೆ ನಗರದ ಬಿ.ವಿ.ಬಿ. ಕಾಲೇಜು ರಸ್ತೆಯಲ್ಲಿನ ಎಕ್ಸಿಕ್ ಬ್ಯಾಂಕ್ ಕೆಳಗಡೆಯ ಆದರ್ಶ ಐಟಿಐನಲ್ಲಿ ಜುಲೈ 9 ರ ಒಳಗೆ ಹೆಸರು ನೋಂದಾಯಿಸಬಹುದು ಎಂದು ಹೇಳಿದ್ದಾರೆ.

ಹೆಸರು ನೋಂದಣಿಗೆ ಎಂ.ಪಿ. ವೈಜಿನಾಥ (ಮೊ: 9008263376) ಅಥವಾ ತರಬೇತುದಾರ ವಿಜಯಕುಮಾರ ಬ್ಯಾಲಹಳ್ಳಿ (8970189141) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net