

ಬೀದರ್: ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಸನ್ಮಾನಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಪ್ರಮುಖರಾದ ಜಾನ್ ವೆಸ್ಲಿ, ಸುನೀಲ್ ಬಚ್ಚನ್, ಜಾರ್ಜ್ ಫರ್ನಾಂಡೀಸ್ ಇದ್ದರು.