

ಬೀದರ್: ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ಪಾರದರ್ಶಕವಾಗಿ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಒತ್ತಾಯಿಸಿದ್ದಾರೆ.
ಕಡಿಮೆ ವಿದ್ಯಾರ್ಥಿಗಳು ಇರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರೆಂದು ಗುರುತಿಸಿ, ಬೇರೆ ಶಾಲೆಗೆ ನಿಯೋಜಿಸುವುದು ಸರ್ಕಾರದ ಪ್ರಕ್ರಿಯೆ. ಇದರಲ್ಲಿ ಯಾವುದೇ ಲೋಪ ದೋಷ, ತಾರತಮ್ಯಕ್ಕೆ ಅವಕಾಶ ಇಲ್ಲದಂತೆ ಹಾಗೂ ದೂರುಗಳು ಬಾರದಂತೆ ನೋಡಿಕೊಳ್ಳಬೇಕು ಬೀದರ್ ಗಡಿ ಜಿಲ್ಲೆಯಾಗಿರುವ ಕಾರಣ ಸಾಧ್ಯವಾದಷ್ಟು ಶಿಕ್ಷಕರನ್ನು ಸದ್ಯದ ಶಾಲೆಗಳಲ್ಲೇ ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಮಾಡಿದ್ದಾರೆ.