10ರಂದು ಗುರು ಪೂರ್ಣಿಮೆ

Shivkumar Swamiji - Copy
Published on

ಬೀದರ್: ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಜುಲೈ 10 ರಂದು ಗುರು ಪೂರ್ಣಿಮೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಬೆಳಿಗ್ಗೆ 6 ರಿಂದ 8 ರ ವರೆಗೆ ಸಿದ್ಧಾರೂಢ ಪ್ರತಿಮೆಗೆ ಮಹಾ ರುದ್ರಾಭಿಷೇಕ, ಬೆಳಿಗ್ಗೆ 9 ರಿಂದ 10 ರ ವರೆಗೆ ಶ್ರೀ ಗುರು ಸ್ತೋತ್ರ, ಭಜನೆ, ಬೆಳಿಗ್ಗೆ 10.30 ರಿಂದ ಶ್ರೀಗಳ ಪ್ರವಚನ, ನಂತರ ಮಠದ ಸಕಲ ಸಾಧಕ, ಸಾಧಕಿಯರಿಂದ ಷೋಡಶೋಪಚಾರ ಮೂಲಕ ಶ್ರೀಗಳ ಪಾದಪೂಜೆ, ನಾಣ್ಯಗಳಿಂದ ತುಲಾಭಾರ, ಸುವರ್ಣ ಕಿರೀಟ ಧಾರಣೆ ಹಾಗೂ ಕನಕ ಪುಷ್ಪವೃಷ್ಟಿ ಜರುಗಲಿದೆ.

ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆ, ಮಹಾರಾಷ್ಟ್ರ, ಗೋವಾ, ತೆಲಂಗಾಣದ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಜಿಲ್ಲೆಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಿದ್ಧಾರೂಢ ಮಠದ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net