ಒಳ ಮೀಸಲಾತಿ ಜಾರಿಗೊಳಿಸಿ

Jonson Ghoode
Published on

ಬೀದರ್: ರಾಜ್ಯದಲ್ಲಿ ಒಳ ಮೀಸಲಾತಿ ಕೂಡಲೇ ಜಾರಿಗೊಳಿಸಬೇಕು ಎಂದು ಮಾದಿಗ ಸಮಾಜದ ಮುಖಂಡರೂ ಆದ ಕಾಂಗ್ರೆಸ್ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮಾದಿಗ ಸಮುದಾಯದ ಮೂರು ದಶಕಗಳ ಹೋರಾಟದ ಫಲವಾಗಿ ಸರ್ವೋಚ್ಚ ನ್ಯಾಯಾಲಯ ಒಳ ಮೀಸಲಾತಿ ಜಾರಿಗೆ ಹಸಿರು ನಿಶಾನೆ ತೋರಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ವರದಿಯನ್ನು ಶೀಘ್ರ ಸರ್ಕಾರಕ್ಕೆ ಸಲ್ಲಿಸಲು ಸಂಬಂಧಪಟ್ಟವರಿಗೆ ಆದೇಶಿಸಬೇಕು. ಒಳ ಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net