ಗುರು ಪೂರ್ಣಿಮೆ 10 ರಂದು

Havgilingeshwar Shivacharya - Copy
Published on

ಬೀದರ್: ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಜುಲೈ 10 ರಂದು ಬೆಳಿಗ್ಗೆ 11ಕ್ಕೆ ಗುರು ಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ.

ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯರ ಸಾನಿಧ್ಯದಲ್ಲಿ  ರಾಚೋಟೇಶ್ವರ ಗದ್ದುಗೆಗೆ ಮಹಾ ರುದ್ರಾಭಿಷೇಕ, ಹಾನಗಲ್ ಕುಮಾರ ಶಿವಯೋಗಿಗಳ ಮೂರ್ತಿಗೆ ಬಿಲ್ವಾರ್ಚನೆ, ಶ್ರೀಗಳ ಪಾದಪೂಜೆ, ಪ್ರವಚನ, ತೀರ್ಥ ಹಾಗೂ ಮಹಾ ಪ್ರಸಾದ ವಿತರಣೆ ಕಾರ್ಯಕ್ರಮಗಳು ಜರುಗಲಿವೆ.

ಭಾಲ್ಕಿಯ ಸುರೇಶ್ ಮಲ್ಲಿಕಾರ್ಜುನ ಪ್ರಸಾದ ದಾಸೋಹಿ ಆಗಿರುವರು. ಭಕ್ತರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹಾವಗಿಲಿಂಗೇಶ್ವರ ಶಿವಾಚಾರ್ಯರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net