ಸಾಂಸ್ಕೃತಿಕ ಕಾರ್ಯಕ್ರಮ ಆ. 18ಕ್ಕೆ

Dilip Kadwad-11
Published on

ಬೀದರ್: ಜೀವನ ಪ್ರಕಾಶ ಕಲ್ಚರಲ್ ಆ್ಯಂಡ್ ವೆಲ್‍ಫೇರ್ ಸೋಸೈಟಿ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಆಗಸ್ಟ್ 18 ರಂದು ಹಮ್ ಏಕ್ ಹೈ ಘೋಷವಾಕ್ಯದಡಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜನರಲ್ಲಿ ದೇಶಾಭಿಮಾನ ಜಾಗೃತಗೊಳಿಸಲು, ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ದಿಲೀಪ್ ಕಾಡವಾದ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕವಿ ಗೋಷ್ಠಿ, ದೇಶ ಭಕ್ತಿ ಗೀತೆಗಳ ಸಂಗೀತ ಸಂಜೆ, ಜಿಲ್ಲೆಯ ನಿವೃತ್ತ ಸೈನಿಕರ ಸನ್ಮಾನ ನಡೆಯಲಿದೆ. ಮಹಾರಾಷ್ಟ್ರದ ಸೋಲಾಪುರದ ಅಂತರರಾಷ್ಟ್ರೀಯ ಕಲಾವಿದರು ಲೈವ್ ಆರ್ಕೆಸ್ಟ್ರಾ ನಡೆಸಿಕೊಡಲಿದ್ದಾರೆ ಎಂದು ಹೇಳಿದ್ದಾರೆ.

18 ವರ್ಷದ ಒಳಗಿನ ಮಕ್ಕಳಿಗೆ ದೇಶ ಭಕ್ತಿ ಗೀತೆ ಗಾಯನ ಸ್ಪರ್ಧೆ ಹಾಗೂ ಶಾಲಾ ಮಕ್ಕಳಿಗೆ ಸಮೂಹ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ. ಆಸಕ್ತರು ಹೆಸರು ನೋಂದಣಿಗಾಗಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net