

ಬೀದರ್: ನಗರದ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಸಂಚಾಲಿತ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿ ಶೆಶಾದ್ರಿ ಕುಲಕರ್ಣಿ 2023-24ನೇ ಸಾಲಿನ ಎಂ.ಎ. ಇಂಗ್ಲಿಷ್ ಪರೀಕ್ಷೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಪ್ರಥಮ ರ್ಯಾಂಕ್ ಗಳಿಸಿ ಸಾಧನೆಗೈದಿದ್ದಾರೆ.
ವಿಶ್ವವಿದ್ಯಾಲಯವು ಜುಲೈ 3 ರಂದು ಫಲಿತಾಂಶ ಪ್ರಕಟಿಸಿದ್ದು, ಶೆಶಾದ್ರಿ ಕುಲಕರ್ಣಿ ಶೇ 73.6 ರಷ್ಟು ಅಂಕ ಗಳಿಸಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ಬಿ.ಜಿ. ಶೆಟಕಾರ್, ಕಾರ್ಯದರ್ಶಿ ಸತೀಶ್ ಪಾಟೀಲ, ಜಂಟಿ ಕಾರ್ಯದರ್ಶಿ ಶಿವಾನಂದ ಗಾದಗೆ, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಮಲ್ಲಿಕಾರ್ಜುನ ಹಂಗರಗೆ, ಉಪ ಪ್ರಾಚಾರ್ಯ ಸೋಮನಾಥ ಬಿರಾದಾರ ಸಂತಸ ವ್ಯಕ್ತಪಡಿಸಿದ್ದಾರೆ.