ಸಾಂಸ್ಕೃತಿಕ ಕಾರ್ಯಕ್ರಮ 13ಕ್ಕೆ

Santosh Joldapke - Copy
Published on

ಬೀದರ್: ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘ ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಹಾತ್ಮ ಬೊಮ್ಮಗೊಂಡೇಶ್ವರ ಉತ್ಸವ ಅಂಗವಾಗಿ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜುಲೈ 13 ರಂದು ಬೆಳಿಗ್ಗೆ 9ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಉದ್ಘಾಟಿಸುವರು. ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬಿಡಿಎ ಮಾಜಿ ಅಧ್ಯಕ್ಷ ಮುರಳಿಧರ ಎಕಲಾರಕರ್, ಕಲಬುರಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುರಾವ್ ಮಲ್ಕಾಪುರೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ, ಖಜಾಂಚಿ ದೇವಪ್ಪ ಚಾಂಬೋಳೆ, ಮೈಲಾರ ಮಲ್ಲಣ್ಣ ದೇವಸ್ಥಾನದ ಮಾಜಿ ಅಧ್ಯಕ್ಷ ಬಸವರಾಜ ಹೇಡೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಸಂಜೀವಕುಮಾರ ಅತಿವಾಳೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ನಾಟ್ಯಶ್ರೀ ನೃತ್ಯಾಲಯದ ನಿರ್ದೇಶಕಿ ರಾಣಿ ಸತ್ಯಮೂರ್ತಿ, ಸಾಹಿತಿ ಡಾ. ಎಂ.ಜಿ. ದೇಶಪಾಂಡೆ, ಕಲಾವಿದ ಶಂಭುಲಿಂಗ ವಾಲ್ದೊಡ್ಡಿ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಜೋಳದಾಪಕೆ ಅಧ್ಯಕ್ಷತೆ ವಹಿಸುವರು.

ಕಲಾವಿದರು ವಿವಿಧ ಕಲಾ ಪ್ರದರ್ಶನ ಮಾಡುವರು. ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ, ನೀಟ್ ಹಾಗೂ ಕೆಸಿಇಟಿಯಲ್ಲಿ ಸಾಧನೆಗೈದ ಜಿಲ್ಲೆಯ ಗೊಂಡ ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು.

ಕಲಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಜೋಳದಾಪಕೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net