ರಾಷ್ಟ್ರಪತಿ, ಪ್ರಧಾನಿ ಭೇಟಿಗೆ ಸಮಯ ಕೋರಿದ ಘೋಡೆ

Jonson Ghoode
Published on

ಬೀದರ್: ಜಿಲ್ಲೆಯವರೇ ಆದ ಕಾಂಗ್ರೆಸ್ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ಜನ ಹಿತದ ವಿಷಯಗಳ ಚರ್ಚೆಗೆ ರಾಷ್ಟ್ರಪತಿ ಹಾಗೂ ಪ್ರಧಾನಿ ಭೇಟಿಗೆ ಸಮಯ ಕೋರಿದ್ದಾರೆ.

ಈ ಕುರಿತು ಅವರು ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯ ಹಾಗೂ ಬೀದರ್ ಜಿಲ್ಲೆಯ ಕೆಲ ಪ್ರಮುಖ ವಿಷಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಸಮಯ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net