ಗೋ ಶಾಲೆ ವಾರ್ಷಿಕೋತ್ಸವ 19ರಂದು

Published on

ಬೀದರ್: ತಾಲ್ಲೂಕಿನ ನಾಗೋರಾ ಗ್ರಾಮದ ಕಾಮಧೇನು ಗೋ ಶಾಲೆಯಲ್ಲಿ ಜುಲೈ 19 ರಂದು ಬೆಳಿಗ್ಗೆ 11ಕ್ಕೆ ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಮಲೂರಿನ ಶಿವಾನಂದ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು. ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಕಾಲೇಜಿನ ಡೀನ್ ಡಾ. ಎಸ್.ವಿ. ಪಾಟೀಲ, ಪಶು ವೈದ್ಯಕೀಯ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಚನ್ನಪ್ಪಗೌಡ ಬಿರಾದಾರ ಪಾಲ್ಗೊಳ್ಳುವರು.

ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ವಿಜಯ ಮಹಾಂತೇಶ, ಡಾ. ವಿ.ಪಿ. ಸಿಂಗ್, ಪಂಚಗವ್ಯ ತಜ್ಞ ಡಾ. ಡಿ.ಪಿ. ರಮೇಶ, ಗೋ ಸೇವಾ ಗತಿವಿಧಿಯ ಕರ್ನಾಟಕ ಉತ್ತರ ಪ್ರಾಂತ ಸಹ ಸಂಯೋಜಕ ಚನ್ನಬಸವಂತ ರೆಡ್ಡಿ ಹಾಗೂ ಕಲಬುರಗಿ ವಿಭಾಗ ಸಂಯೋಜಕ ಶ್ರೀಕಾಂತ ಮೋದಿ ಅವರನ್ನು ಸನ್ಮಾನಿಸಲಾಗುವುದು ಎಂದು ಗೋ ಶಾಲೆಯ ಸಂಚಾಲಕ ಶಿವಕುಮಾರ ಹಿರೇಮಠ ತಿಳಿಸಿದ್ದಾರೆ.

ಇದೇ ವೇಳೆ ಗೋ ಉತ್ಪನ್ನಗಳ ಪ್ರದರ್ಶನ, ಮಾರಾಟ, ಬೀದರ್‍ನ ಶ್ರೀ ಸಿದ್ಧರಾಮೇಶ್ವರ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ರೈತರಿಗೆ ಗೋ ಕೃಪಾಮೃತ ಉಚಿತವಾಗಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net