

ಬೀದರ್: ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಜಿಡಗಾ ಮಠದ ಸಿದ್ಧರಾಮ ಶಿವಯೋಗಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಕಾಂಗ್ರೆಸ್ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ಮನವಿ ಮಾಡಿದ್ದಾರೆ.
ಈ ಕುರಿತು ಅವರು ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಜನರಿಗೆ ಸಂಸ್ಕಾರ, ದಾಸೋಹ, ಧಾರ್ಮಿಕ ಕಾರ್ಯಗಳ ಮೂಲಕ ಶ್ರೀಗಳು ದೇಶದಲ್ಲಿ ಕಲ್ಯಾಣ ಕರ್ನಾಟಕದ ಕೀರ್ತಿ ಪಸರಿಸುವ ಕೆಲಸ ಮಾಡಿದ್ದಾರೆ. ಜಿಡಗಾವನ್ನು ಸುಕ್ಷೇತ್ರವಾಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
ಶ್ರೇಷ್ಠ ಸಂತರಾಗಿದ್ದ ಅವರಿಗೆ ಭಾರತ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಬೇಕು ಎಂದು ಹೇಳಿದ್ದಾರೆ.