ಬೀದರ್: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ವಿಕಾಸ ಅಕಾಡೆಮಿ ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಕಲಬುರಗಿಯ ವಿ.ಜಿ. ಮಹಿಳಾ ಕಾಲೇಜಿನಲ್ಲಿ ಜುಲೈ 27 ಮತ್ತು 28 ರಂದು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ವಿಕಾಸ ಅಕಾಡೆಮಿಯ ಕಲ್ಯಾಣ ಕರ್ನಾಟಕ ಸಹ ಸಂಚಾಲಕ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.
27 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರ ವರೆಗೆ ಕನ್ನಡ ಮಾಧ್ಯಮ ಶಿಕ್ಷಕರು, ಉಪನ್ಯಾಸಕರಿಗೆ ಹಾಗೂ 28 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರ ವರೆಗೆ ಸಿಬಿಎಸ್‍ಇ ಪಠ್ಯಕ್ರಮದ ಶಿಕ್ಷಕರು, ಉಪನ್ಯಾಸಕರಿಗೆ ಶಿಕ್ಷಣ ತಜ್ಞ ಗುರುರಾಜ ಕರಜಗಿ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಕಾರ್ಯಾಗಾರದಲ್ಲಿ ತರಬೇತಿ ಪಡೆಯುವ ಶಿಕ್ಷಕರು ಹಾಗೂ ಉಪನ್ಯಾಸಕರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿಸಿ, ಕಲ್ಯಾಣ ಕರ್ನಾಟಕದ ಫಲಿತಾಂಶ ಹೆಚ್ಚಿಸುವುದು ಕಾರ್ಯಾಗಾರದ ಉದ್ದೇಶವಾಗಿದೆ. ಶಿಕ್ಷಕರು ಹಾಗೂ ಉಪನ್ಯಾಸಕರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಕಾರ್ಯಾಗಾರದಲ್ಲಿ ಪಾಲ್ಗೊಳ್ಳ ಬಯಸುವವರು ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448422734 ಅಥವಾ 9480585000 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.