

ಬೀದರ್: ಕರ್ನಾಟಕ ವಿಕಾಸ ರಂಗದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಂಗಮೇಶ ಬಿ.ಜ್ಯಾಂತೆ ಅವರನ್ನು ನೇಮಕ ಮಾಡಲಾಗಿದೆ. ಭಾಲ್ಕಿ ತಾಲೂಕಿನ ಜೈನಾಪುರ ನಿವಾಸಿಯಾಧ ಜ್ಯಾಂತೆ ಅವರ ಕನ್ನಡ ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗಾಗಿ ಸಲ್ಲಿಸುತ್ತಿರುವ ಸೇವೆ ಪರಿಗಣಿಸಿ ನೇಮಕ ಮಾಡಲಾಗಿದ್ದು, ಸಂಘಟನೆಯನ್ನು ಜಿಲ್ಲೆಯಲ್ಲಿ ಬಲಿಷ್ಠವಾಗಿ ಬೆಳೆಸಬೇಕು ಎಂದು ಅಧ್ಯಕ್ಷ ವ.ಚ. ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.