ದಾವಣಗೆರೆಯಲ್ಲಿ ಬಿಲ್ವಪತ್ರಿ ಸಸಿ ವಿತರಣೆ

Tree Plantation Abhiyan At Davangere - Copy
Published on

ಬೀದರ್: ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹಮ್ಮಿಕೊಳ್ಳಲಾದ ಏಕ್ ಲಾಖ್ ಪೇಡ್ ಮಾ ಕೇ ನಾಮ್ ಅಭಿಯಾನ ಅಂಗವಾಗಿ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಬಿಲ್ವಪತ್ರಿ ಸಸಿ ವಿತರಿಸಲಾಯಿತು.

ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ. ಅವರು ಕಚೇರಿ ಆವರಣದಲ್ಲಿ ಬಿಲ್ವಪತ್ರಿ ಸಸಿ ನೆಟ್ಟರು.

ಮಾತೆ ಕರುಣಾದೇವಿ ಅವರ ಹೆಸರಲ್ಲಿ ಬಿಲ್ವಪತ್ರಿ ಸೇರಿ 1 ಲಕ್ಷ ವಿತರಣೆ ಹಾಗೂ ನೆಡುವಿಕೆ ಅಭಿಯಾನ ಹಮ್ಮಿಕೊಂಡಿರುವುದು ಸಂತಸದ ಸಂಗತಿ ಎಂದು ಅವರು ಹೇಳಿದರು.

ನೌಬಾದ್-ಗೋರಟಾ-ಬೆಮಳಖೇಡ ಮಠದ ಡಾ. ರಾಜಶೇಖರ ಶಿವಾಚಾರ್ಯರು ಹಾಗೂ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಅವರು ಪರಿಸರ ಸಂರಕ್ಷಣೆಗಾಗಿ ವಿವಿಧೆಡೆ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಕಾಳಜಿಯ ಅಭಿಯಾನಕ್ಕೆ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.

ಡಾ. ರಾಜಶೇಖರ ಶಿವಾಚಾರ್ಯ, ಶಿವಯ್ಯ ಸ್ವಾಮಿ, ಶ್ರೀನಿವಾಸ್ ತೆಲಂಗ್ ಮತ್ತಿತರರು ಇದ್ದರು.

ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆ, ಶ್ರೀ ಜಗದ್ಗುರು ಪಂಚಾಚಾರ್ಯ ಯುವಕ ಸಂಘದ, ಶ್ರೀಶೈಲದ ಅಕ್ಕ ಮಹಾದೇವಿ ಚೈತನ್ಯ ಪೀಠ, ನೌಬಾದ್‍ನ ಜ್ಞಾನ ಶಿವಯೋಗಾಶ್ರಮ ಹಾಗೂ ಈಶ್ವರಿ ಮಹಿಳಾ ಮಂಡಳ ವತಿಯಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net